kic-banner
 
 
ಮೂಲಭೂತ ವಿವರಣೆ
ಅಂಶಗಳು ಕಾಯ್ದೆಯ ಪ್ರಕರಣಗಳು ದೂರುಗಳು/ಅಪೀಲುಗಳು ದಂಡನೆಗಳು
 
ಕಾಯ್ದೆ ಬಗ್ಗೆ ಪ್ರಮುಖ ಅಂಶಗಳು: ದಂಡನೆಗಳು
 
ಪ್ರಕರಣ 20: ದಂಡನೆಗಳು
 
1.
ಕೇಂದ್ರ ಮಾಹಿತಿ ಆಯೋಗ ಅಥವಾ ಸಂದರ್ಭನುಸಾರ ರಾಜ್ಯ ಮಾಹಿತಿ ಆಯೋಗವು ಯಾವುದೇ ದೂರು ಅಥವಾ ಕೋರಿಕೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಮಯದಲ್ಲಿ, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಅಥವಾ ಸಂದರ್ಭನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯು, ಯಾವುದೇ ಯುಕ್ತ ಕಾರಣವಿಲ್ಲದೆ ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾನೆಂದು ಅಥವಾ 7ನೇ ಪ್ರಕರಣದ (1)ನೇ ಉಪ ಪ್ರಕರಣದ ಅಡಿಯಲ್ಲಿ ನಿದಿಷ್ಟಪಡಿಸಿದ ಸಮಯದೊಳಗೆ ಮಾಹಿತಿಯನ್ನು ಒದಗಿಸಿಲ್ಲವೆಂದು ಅಬಿಪ್ರಾಯಪಟ್ಟಲ್ಲಿ, ಅಥವಾ ಮಾಹಿತಿಗಾಗಿ ಕೋರಿಕೆಯನ್ನು ದುರುದ್ದೇಶದಿಂದ ನಿರಾಕರಿಸಿದ್ದಾನೆಂದು ಅಥವಾ ಗೊತ್ತಿದ್ದೂ ಸರಿಯಲ್ಲದ, ಅಪೂರ್ಣ ಅಥವಾ ದಾರಿತಪ್ಪಿಸುವ ಮಾಹಿತಿಗಳನ್ನು ನೀಡಿದ್ದಾನೆಂದು ಅಥವಾ ಕೋರಿಕೆಯ ವಿಷಯವಾಗಿದ್ದ ಮಾಹಿತಿಯನ್ನು ನಾಶಪಡಿಸಿದ್ದಾನೆಂದು ಅಥವಾ ಮಾಹಿತಿ ಒದಗಿಸುವುದಕ್ಕೆ ಯಾವುದೇ ರೀತಿಯಿಂದ ಅಡ್ಡಿಪಡಿಸಿದ್ದಾನೆಂದುಅಭಿಪ್ರಾಯಪಟ್ಟಲ್ಲಿ, ಅರ್ಜಿಯನ್ನು ಸ್ವೀಕರಿಸಿದ ದಿನದವರೆಗೆ ಅಥವಾ ಮಾಹಿತಿಯನ್ನು ಒದಗಿಸಿದ ದಿನದವರೆಗೆ ಪ್ರತಿದಿನಕ್ಕೆ ಎರಡುನೂರ ಐವತ್ತು ರೂಪಾಯಿಗಳ ಜುಲ್ಮಾನೆಯನ್ನು ವಿಧಿಸತಕ್ಕದ್ದು, ಆದರೆ, ಜುಲ್ಮಾನೆಯ ಒಟ್ಟು ಮೊತ್ತವು ಇಪ್ಪತ್ತೈದು ಸಾವಿರ ರೂ.ಗಳನ್ನು ವೀರತಕ್ಕದ್ದಲ್ಲ: ಪರಂತು, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಅಥವಾ ಸಂದರ್ಭನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಯಾವುದೇ ದಂಡನೆಯನ್ನು ವಿಧಿಸುವ ಮುನ್ನ ಅವನಿಗೆ ತನ್ನ ಅಹವಾಲನ್ನು ಹೇಳಿಕೊಳ್ಳಲು ಯುಕ್ತ ಅವಕಾಶವನ್ನು ನೀಡತಕ್ಕದ್ದು. ಮತ್ತೂ ಪರಂತು, ತಾನು ಸಮುಚಿತವಾಗಿ ಮತ್ತು ಶ್ರದ್ಧೆಯಿಂದ ಕಾರ್ಯ ನಿರ್ವಹಿಸಿದ್ದೇನೆಂದು ರುಜುವಾತುಪಡಿಸುವುದು ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಅಥವಾ ಸಂದರ್ಭನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯ ಹೊಣೆಯಾಗಿರತಕ್ಕದ್ದು.
 
2.
ಕೇಂದ್ರ ಮಾಹಿತಿ ಆಯೋಗ ಅಥವಾ ಸಂದರ್ಭನುಸಾರ ರಾಜ್ಯ ಮಾಹಿತಿ ಆಯೋಗವು ಯಾವುದೇ ದೂರು ಅಥವಾ ಮನವಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಮಯದಲ್ಲಿ, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಅಥವಾ ಸಂದರ್ಭನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯು ಯಾವುದೇ ಯುಕ್ತ ಕಾರಣವಿಲ್ಲದೆ ಹಾಗೂ ಸತತವಾಗಿ, ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಸ್ವೀಕರಿಸಲು ವಿಫಲನಾಗಿದ್ದಾನೆಂದು ಅಥವಾ 7ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ ನಿರ್ಧಿಷ್ಟಪಡಿಸಿದ ಸಮಯದೊಳಗೆ ಮಾಹಿತಿ ನೀಡಿಲ್ಲವೆಂದು ಅಥವಾ ದುರುದ್ದೇಶದಿಂದ ಮಾಹಿತಿಯ ಕೋರಿಕೆಯನ್ನು ನಿರಾಕರಿಸಿದ್ದಾನೆಂದು ಅಥವಾ ಗೊತ್ತಿದ್ದೂ ಸರಿಯಲ್ಲದ, ಅಪೂರ್ಣ ಅಥವಾ ದಾರಿ ತಪ್ಪಿಸುವ ಮಾಹಿತಿ ನೀಡಿದ್ದಾನೆಂದು ಅಥವಾ ಕೋರಿಕೆಯ ವಿಷಯವಾಗಿದ್ದ ಮಾಹಿತಿಯನ್ನು ನಾಶಪಡಿಸಿದ್ದಾನೆಂದು ಅಥವಾ ಮಾಹಿತಿ ಒದಗಿಸುವುದಕ್ಕೆ ಯಾವುದೇ ರೀತಿಯಿಂದ ಅಡ್ಡಿಪಡಿಸಿದ್ದಾನೆಂದು ಅಭಿಪ್ರಾಯಪಟ್ಟರೆ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಅಥವಾ ಸಂದರ್ಭನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯ ವಿರುದ್ಧ ಅವನಿಗೆ ಅನ್ವಯವಾಗುವ ಸೇವಾ ನಿಯಮಗಳ ಅಡಿಯಲ್ಲಿ ಶಿಸ್ತು ಕ್ರಮ ಕೈಗ